Politics

*ಜೆಡಿಎಸ್ ಮುಖಂಡನ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ನಡೆದಿದೆ.

ಜೆಡಿಎಸ್‌ ಪಕ್ಷದ ಮುಖಂಡ ವೆಂಕಟೇಶ್ (52) ಮೃತ ದುರ್ದೈವಿ. ತಮ್ಮನಾಯಕನಹಳ್ಳಿ ಗೇಟ್‌ನಿಂದ ವೆಂಕಟೇಶ್ ತಮ್ಮ ಊರಾದ ತಮ್ಮನಾಯಕನಹಳ್ಳಿ ನಿವಾಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ. ಕೃತ್ಯದ ಭೀಕರತೆಗೆ ಕೈಯೊಂದು ತುಂಡಾಗಿ ರಸ್ತೆಯಲ್ಲಿ ಬಿದ್ದಿದೆ.

ದುಷ್ಕರ್ಮಿಗಳ ಬಗ್ಗೆ ಹಾಗೂ ಕೃತ್ಯಕ್ಕೆ ಕಾರಣ ಯಾರೆಂದು ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಎಸ್‌ಪಿ ಕುಶಲ್‌ ಚೌಕ್ಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button