
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಜೆಡಿಎಸ್ ಮುಖಂಡ ಫೈಜುಲ್ಲಾ ಮಾಡಿವಾಲೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬಹಳ ವರ್ಷದಿಂದ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಮಾಡಿವಾಲೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಕ್ಕೆ ಆಪ್ತರಾಗಿದ್ದರು. ಬುಧವಾರ ಸಂಜೆ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸುವ ವೇಳೆಗೆ ಕೊನೆಯುಸಿರೆಳೆದಿದ್ದಾರೆ.
ಮುಸ್ಲಿಂ ಸಮಾಜದ ಮುಖಂಡರಾಗಿ ಗುರುತಿಸಿಕೊಂಡಿದ್ದ ಅವರು, ಎಲ್ಲ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸ್ನೇಹಪರ ಸಂಬಂಧ ಹೊಂದಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ