
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಉಭಯ ಪಕ್ಷಗಳಿಗೆ ಮುಖಂಡರು ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ. ಸಾಲು ಸಾಲು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಜೆಡಿಎಸ್ ಮುಖಂಡ ಮುಕ್ತಾರ್ ಇನಾಮ್ದಾರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಬೆಳಗಾವಿಯ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮುಕ್ತಾರ್ ಇನಾಮ್ದಾರ್ ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.