
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೆಡಿಎಸ್ ನಾಯಕರಿಗೆ ಮತ್ತೊಂದು ಬಿಗ್ ಶಾಕ್. ಜೆಡಿಎಸ್ ಮುಖಂಡರು, ಮಾಜಿ ಶಾಸಕರಾದ ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್, ಬೆಂಗಳೂರು ದಾಸರಹಳ್ಳಿಯ ಆರ್ ಮಂಜುನಾಥ್ ಅವರು ಅಪಾರ ಬೆಂಬಲಿಗರೊಂದಿಗೆ ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆ ಆದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕಾಂಗ್ರೆಸ್ ಮುಖಂಡರಾದ ಬಿ ಎಲ್ ಶಂಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಶಾಸಕರಾದ ನರೇಂದ್ರಸ್ವಾಮಿ, ನೆಲಮಂಗಲ ಶ್ರೀನಿವಾಸಯ್ಯ, ಸಿಎಂ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.