ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಜೆಡಿಎಸ್ ಪಕ್ಷದ ಇಬ್ಬರು ಪ್ರಮುಖ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ. ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ವಿರುದ್ಧ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಿ ಬಹಳ ಕಡಿಮೆ ಅಂತರದಲ್ಲಿ ಸೋತಿದ್ದ, ಜೆಡಿಎಸ್ ಪಕ್ಷದ ಸಂಘಟನೆ ಮಾಡಿಕೊಂಡು ಬಂದಿದ್ದ ಡಿ.ಎಂ. ವಿಶ್ವನಾಥ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ. ಅವರ ಕುಟುಂಬ ಕಾಂಗ್ರೆಸ್ ಪಕ್ಷದ ಆಧಾರ ಸ್ತಂಭವಾಗಿತ್ತು. ಅವರು ನನ್ನ ಪರವಾಗಿ ಒಂದೆರಡು ಚುನಾವಣೆಗಳಲ್ಲಿ ಪ್ರಚಾರ ಮಾಡಿ ಬೆಂಬಲ ನೀಡಿದ್ದ ನೆನಪು ಈಗಲೂ ಹಸಿಯಾಗಿದೆ. ನಂತರ ಜೆಡಿಎಸ್ ನಲ್ಲಿ ನಾಯಕರಾಗಿ ಬೆಳೆಯುವ ಕನಸು ಕಂಡ ಕುಟುಂಬ ಆ ಕೆಲಸ ಮಾಡಿಕೊಂಡು ಬಂದಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್ ನ ಇಬ್ಬರು ನಾಯಕರಾದ ಡಿ ಎಂ. ವಿಶ್ವನಾಥ್, ರಾಧಾಕೃಷ್ಣ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಡಿ.ಕೆ.ಶಿವಕುಮಾರ್, ಇಡೀ ನಮ್ಮ ಜಿಲ್ಲೆಯಲ್ಲಿ ಡಿ.ಎಂ ವಿಶ್ವನಾಥ್ ಅವರು ಪಕ್ಷ ಸಂಘಟನೆ ಕೆಲಸ ಮಾಡಿದ್ದಾರೆ. ಇಂದು ಅವರಿಗೆ ಬಿಜೆಪಿಯಿಂದ ಆಹ್ವಾನ ಇದ್ದರೂ ರಾಜ್ಯ, ಜಿಲ್ಲೆ ಹಾಗೂ ಕನಕಪುರ ಕ್ಷೇತ್ರದ ಪರಿಸ್ಥಿತಿ ಅವಲೋಕಿಸಿ, ಡಿ.ಕೆ. ಶಿವಕುಮಾರ್ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೋಗಬೇಕು ಎಂದು ತಮ್ಮ ನಾಯಕರುಗಳ ಜತೆ ಚರ್ಚೆ ಮಾಡಿ ಈ ತೀರ್ಮಾನ ಮಾಡಿದ್ದಾರೆ ಎಂದರು.
ಕನಕಪುರ ಕ್ಷೇತ್ರದ ಶಾಸಕನಾಗಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷನಾಗಿ ವಿಶ್ವನಾಥ್ ಮತ್ತು ಕನಕಪುರ, ರಾಮನಗರ ಜಿಲ್ಲೆಯ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡು ತುಂಬು ಹೃದಯದ ಸ್ವಾಗತ ಮಾಡುತ್ತಿದ್ದೇನೆ. ಮಂಡ್ಯದ ಕಿಲಾರ ಕ್ಷೇತ್ರದಲ್ಲಿ ಎಸ್.ಎಂ. ಕೃಷ್ಣ ಅವರ ಜತೆ ಉತ್ತಮ ಒಡನಾಟ ಇಟ್ಟುಕೊಂಡಿದ್ದ, ಜೆಡಿಎಸ್ ಪಕ್ಷದ ಜತೆ ಗುರುತಿಸಿಕೊಂಡಿದ್ದ ರಾಧಾಕೃಷ್ಣ ಅವರು ಬಹಳ ಹಿಂದೆಯೇ ಯಾವುದೇ ಷರತ್ತು ಇಲ್ಲದೆ ಪಕ್ಷಕ್ಕೆ ಸೇರುತ್ತೇವೆ ಎಂದು ಹೇಳಿದ್ದರು. ನೀವು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಹೊರಟಿದ್ದು, ನಾನು ಕಾಂಗ್ರೆಸ್ ಪಕ್ಷಕ್ಕೆ ಅಳಿಲು ಸೇವೆ ಮಾಡುತ್ತೇನೆ, ನನ್ನ ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದು ಮಂಡ್ಯ ಜಿಲ್ಲೆಯ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರುತ್ತಿದ್ದಾರೆ. ಅವರನ್ನು ತುಂಬು ಹೃದಯದಿಂದ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದರು.
ಈ ಇಬ್ಬರು ನಾಯಕರು ಹಾಗೂ ಅವರ ಜತೆ ಬರುತ್ತಿರುವ ಇತರ ನಾಯಕರನ್ನು ನಾನು ಪಕ್ಷಕ್ಕೆ ಸ್ವಾಗತಿಸುತ್ತೇನೆ. ನಮ್ಮ ಪಕ್ಷದಲ್ಲಿ ಹೊಸಬರು, ಹಳಬರು ಎಂಬ ವ್ಯತ್ಯಾಸವಿಲ್ಲದೆ, ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಲಾಗುವುದು. ಇದೇ ಕಾರಣಕ್ಕೆ ಮಂಡ್ಯದ ಕಾಂಗ್ರೆಸ್ ನಾಯಕರು ಕೂಡ ನಿಮ್ಮನ್ನು ಸ್ವಾಗತಿಸಲು ಇಂದು ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು ಹೇಳಿದರು.
‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಬ್ರೇಕ್
https://pragati.taskdun.com/siddu-nija-kanasugalubook-releasebangalore-courtstay-orderdr-yatindra-siddaramaiah/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ