
ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ನಾಯಕಿ ಚೈತ್ರಾ ಕೋಠಾರಕರ್ ಪುತ್ರ ಚಿರಾಗ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದು, ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದ್ರಾದಲ್ಲಿ ಈ ಘಟನೆ ನಡೆದಿದೆ. ಯುವತಿಯ ದೇಹದ ಮೇಲೆ ಗಾಯಗಳಾಗಿದ್ದು, ದೌರ್ಜನ್ಯಕ್ಕೆ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಗಿ ಯುವತಿಯ ತಾಯಿ ಆರೋಪಿಸಿದ್ದಾರೆ. ತಕ್ಷಣ ಆರೋಪಿ ಚಿರಾಗ್ ನನ್ನು ಬಂಧಿಸದಿದ್ದರೆ ಗ್ರಾಮಸ್ಥರು ಡಿಸಿ ಕಚೇರಿ ಹಾಗೂ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಚಿರಾಗ್ ತಲೆಮರೆಸಿಕೊಂಡಿದ್ದಾನೆ. ಯುವತಿಯ ಪೋಷಕರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.




