Latest

ಮಾಜಿ ಸಚಿವ, ಜೆಡಿಎಸ್ ಶಾಸಕ ನಿಧನದ ಸುದ್ದಿ ಸುಳ್ಳು?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಚಿವ, ಜೆಡಿಎಸ್​ ಶಾಸಕ ಸತ್ಯನಾರಾಯಣ ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ​ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎನ್ನುವ ಸುದ್ದಿ ರಾಜ್ಯದ ಬಹುತೇಕ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

ಆದರೆ ಅವರಿಗೆ ಇನ್ನೂ ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.

Home add -Advt

ಸತ್ಯನಾರಾಯಣ ಅವರು ಕೆಲ ದಿನಗಳಿಂದ ಲಿವರ್ ಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆದರೆ ಅವರು ನಿಧನರಾಗಿದ್ದಾರೆ ಎಂದು ಎಲ್ಲೆಡೆ ಸುದ್ದಿಯಾಗಿದೆ. ಬಹುತೇಕ ಮಾಧ್ಯಮಗಳೂ ಸುದ್ದಿ ಭಿತ್ತರಿಸಿವೆ.  ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಹಲವರು ಸಂತಾಪವನ್ನೂ ಸೂಚಿಸಿದ್ದಾರೆ.

ಆದರೆ ಸುದ್ದಿ ಸುಳ್ಳು, ಅವರಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.

Related Articles

Back to top button