Latest

*JDS ಶಾಸಕರು ಕಾಂಗ್ರೆಸ್ ಸೇರುವುದು ಖಚಿತ; ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಜೆಡಿಎಸ್ ಶಾಸಕ ಶಿವಲಿಂಗೇಗೌಡರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ನೂರಕ್ಕೆ ನೂರರಷ್ಟು ಅವರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡರು 100 ಪರ್ಸೆಂಟ್ ಕಾಂಗ್ರೆಸ್ ಗೆ ಬರ್ತಾರೆ. ಯಾಕೆ ಅನುಮಾನಾನಾ? ಎಂದು ಪ್ರಶ್ನಿಸಿದ್ದಾರೆ.

ವಿಧಾನಮಂಡಲ ಅಧಿವೇಶನ ಮುಗಿದ ಮೇಲೆ ಯಾವತ್ತು ಬೇಕಾದರೂ ಅವರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ತಿಳಿಸಿದ್ದಾರೆ.

ಅರಸಿಕೆರೆ ಜೆಡಿಎಸ್ ಶಾಸಕರಾಗಿರುವ ಶಿವಲಿಂಗೇಗೌಡರಿಗೆ ಸೆಡ್ಡು ಹೊಡೆದು ಹೊಸ ಅಭ್ಯರ್ಥಿಯನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದರು. ಅರಸಿಕೆರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಈಬಾರಿ ಅರಸಿಕೆರೆ ಜೆಡಿಎಸ್ ಅಭ್ಯರ್ಥಿಯಾಗಿ ಬಾಣಾವರ ಅಶೋಕ್ ಅವರನ್ನು ಕಣಕ್ಕಿಳಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಶಿವಲಿಂಗೆಗೌಡರು ನೂರಕ್ಕೆ ನೂರರಷ್ಟು ಕಾಂಗ್ರೆಸ್ ಗೆ ಬರುತ್ತಾರೆ ಎಂದು ಹೇಳಿದ್ದಾರೆ.

Home add -Advt

*ಹಾಲಿ JDS ಶಾಸಕನಿಗೆ ಸೆಡ್ಡು ಹೊಡೆದು ಹೊಸ ಅಭ್ಯರ್ಥಿಗೆ ಅರಸಿಕೆರೆ ಟಿಕೆಟ್ ಘೋಷಿಸಿದ HDK*

https://pragati.taskdun.com/h-d-kumaraswamyarasikere-jds-candidateannouncebanavara-ashok/

Related Articles

Back to top button