*ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗವಹಿಸುವುದಿಲ್ಲ : ಎಚ್.ಡಿ. ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ : ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗವಹಿಸುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಆದರೆ, ಇದಕ್ಕೆ ಜೆಡಿಎಸ್ ಬೆಂಬಲ ಇಲ್ಲ ಎಂದು ಹೇಳಿದ್ದಾರೆ. ಪಾದಯಾತ್ರೆ ವಿಚಾರದಲ್ಲಿ ನಮ್ಮನ್ನು (ಜೆಡಿಎಸ್) ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಅದಕ್ಕೆ ನಮ್ಮ ಬೆಂಬಲವಿಲ್ಲ ಎಂದರು.
ಪಾದಯಾತ್ರೆಗೆ ಬೆಂಬಲ ನೀಡದೇ ಇರುವ ಬಗ್ಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರು ಮಂಗಳವಾರದ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.
ಕೇರಳದಲ್ಲಿ ಮಳೆಯಿಂದ ನೂರಾರು ಜನರ ಜೀವಕ್ಕೆ ಹಾನಿಯಾಗಿದೆ. ರಾಜ್ಯದಿಂದ ಹೋದವರು ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಆಗಿದೆ. ಮತ್ತೊಂದೆಡೆ, ಈಗ ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಸಮಯ. ಹೀಗಾಗಿ ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ