*ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗವಹಿಸುವುದಿಲ್ಲ : ಎಚ್.ಡಿ. ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ : ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗವಹಿಸುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಆದರೆ, ಇದಕ್ಕೆ ಜೆಡಿಎಸ್ ಬೆಂಬಲ ಇಲ್ಲ ಎಂದು  ಹೇಳಿದ್ದಾರೆ.  ಪಾದಯಾತ್ರೆ ವಿಚಾರದಲ್ಲಿ ನಮ್ಮನ್ನು (ಜೆಡಿಎಸ್) ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಅದಕ್ಕೆ ನಮ್ಮ ಬೆಂಬಲವಿಲ್ಲ ಎಂದರು.Home add -Advt ಪಾದಯಾತ್ರೆಗೆ ಬೆಂಬಲ ನೀಡದೇ ಇರುವ ಬಗ್ಗೆ ಜೆಡಿಎಸ್ … Continue reading *ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗವಹಿಸುವುದಿಲ್ಲ : ಎಚ್.ಡಿ. ಕುಮಾರಸ್ವಾಮಿ*