Kannada NewsKarnataka NewsLatest
*ಜೆಡಿಎಸ್ ನಿಂದ ಸಿ.ಎಂ.ಇಬ್ರಾಹಿಂ, ಸಿ.ಕೆ.ನಾಣು ಅಧಿಕೃತ ಉಚ್ಛಾಟನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೆಡಿಎಸ್ ನಿಂದ ಸಿ.ಎಂ.ಇಬ್ರಾಹಿಂ ಅವರನ್ನು ಅಧಿಕೃತವಾಗಿ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರಿನ ಜೆ.ಪಿ.ಭವನದಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು.
ಇದೇ ವೇಳೆ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರನ್ನು ಉಚ್ಛಾಟಿಸಲು ತೀರ್ಮಾನ ಕೈಗೊಳ್ಳಲಾಯಿತು.




