
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಸಜ್ಜಾಗಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾರ್ಚ್ 26ರಂದು ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡಿಗಡೆಯಾಗಲಿದೆ. ಎರಡೂ ರಾಷ್ಟ್ರೀಯಪಕ್ಷಗಳಿಗಿಂತ ಜೆಡಿಎಸ್ ಏನೂ ಕಡಿಮೆ ಇಲ್ಲ, ಕಳಪೆಯೂ ಅಲ್ಲ ಎಂದು ಹೇಳಿದರು.
123 ಸೀಟ್ ಗೆಲ್ಲುವ ಗುರಿ ಇಟ್ಟುಕೊಂಡು ಜನರ ಬಳಿ ಹೋಗುತ್ತಿದ್ದೇವೆ. 15ರಿಂದ 16 ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಪಕ್ಷಕ್ಕೆ ಸಮಸ್ಯೆ ಇದೆ. ರಾಷ್ಟ್ರೀಯ ಪಕ್ಷಗಳಿಂದ ಕೆಲವರು ಜೆಡಿಎಸ್ ಗೆ ಬರಲಿದ್ದಾರೆ. ಹಾಗಾಗಿ 15 ಕ್ಷೇತ್ರಗಳಿಗೆ ಜೆಡಿಎಸ್ ಗೆ ಯಾರಾದರೂ ಬರಬಹುದು. ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಇನ್ನೂ ಅಭ್ಯರ್ಥಿಗಳ ಘೋಷಣೆಯಾಗಿಲ್ಲ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ