Latest

ಜೆಡಿಎಸ್ – ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ; ಮಾಜಿ ಶಾಸಕರ ಕಾರಿನ ಮೇಲೆ ಕಲ್ಲು ತೂರಾಟ

ಪ್ರಗತಿವಾಹಿನಿ ಸುದ್ದಿ; ರಾಮನಗರ: ಕ್ಷುಲ್ಲಕ ಕಾರಣಕ್ಕಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಪರಸ್ಪರ ಹೊಡೆದಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಾಮಸಾಗರದಲ್ಲಿ ನಡೆದಿದೆ.

ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ ಕಾರ್ಯಕ್ರಮ ವೇಳೆ ಮಾಜಿ ಶಾಸಕ ಬಾಲಕೃಷ್ಣ ಹಾಲಿ ಶಾಸಕರಿಗೆ ಕಾಯದೇ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದ್ದಾರೆ ಎನ್ನಲಾಗಿದೆ. ಒಳ ರಾಜಕೀಯ ಹಾಗೂ ಶಿಷ್ಟಾಚಾರ ಪಾಲನೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕ್ರತರು ಗಲಾಟೆ ಆರಂಭವಿಸಿದ್ದಾರೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ಆರಂಭವಾಗಿ ಮಾರಾಮಾರಿ ನಡೆದಿದೆ.

Home add -Advt

ಈ ವೇಳೆ ಎರಡೂ ಪಕ್ಷದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದು, ಉದ್ರಿಕ್ತರು ಮಾಜಿ ಶಾಸಕ ಹೆಚ್.ಸಿ ಬಾಲಕೃಷ್ಣ ಕಾರಿನ ಮೇಲೂ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುದೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

9 ಐಎ ಎಸ್ ಅಧಿಕಾರಿಗಳ ಸ್ಥಳ ನಿಯೋಜನೆ

https://pragati.taskdun.com/latest/9-ias-officerspostingstate-govt/

Related Articles

Back to top button