Latest

ಗ್ರಾಮ ಪಂಚಾಯ್ತಿ ಪಟ್ಟಕ್ಕಾಗಿ ಖಾಲಿ ಚೆಕ್ ಗೆ ಸಹಿ; ಶಾಸಕನ ವಿರುದ್ಧ ಗಂಭೀರ ಆರೋಪ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಪಡೆಯಲು ಜೆಡಿಎಸ್ ಖಾಲಿ ಚೆಕ್ ಗೆ ಸಹಿ ಮಾಡಿಸಿಕೊಳ್ಳುವ ಹೊಸ ಅಸ್ತ್ರ ಪ್ರಯೋಗ ನಡೆಸಿದ್ದು, ಶಾಸಕ ಡಿ.ಸಿ.ತಮ್ಮಣ್ಣ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.

ಮಂಡ್ಯ ಜಿಲ್ಲೆ ಮದ್ದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್ ಗ್ರಾಮ ಪಂಚಾಯ್ತಿ ಚುಕ್ಕಾಣಿ ಹಿಡಿಯುವ ನಿಟ್ಟಿನಲ್ಲಿ ಬೇರೆ ಪಕ್ಷದಿಂದ ಬಂದಿರುವ ಗ್ರಾಮ ಪಂಚಾಯ್ತಿ ಸದಸ್ಯರ ಬಳಿ ಶಾಸಕ ಡಿ.ಸಿ.ತಮ್ಮಣ್ಣ ಖಾಲಿ ಚೆಕ್ ಹಾಗೂ ಪ್ರನೋಟ್ ಗೆ ಸಹಿ ಹಾಕಿಸಿಕೊಂಡು ಜೆಡಿಎಸ್ ಗೆ ಸೇರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಶಾಸಕರು ಚೆಕ್ ಗಳಿಗೆ ಹಾಗೂ ಪ್ರನೋಟ್ ಗೆ ಸಹಿ ಹಾಕಿಸಿಕೊಂಡು ಜೆಡಿಎಸ್ ಗೆ ಸೇರಿಸಿಕೊಳ್ಳುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಲ್ಲದೇ ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಬೆಂಬಲಿಸಬೇಕು ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button