ಪ್ರಗತಿವಾಹಿನಿ ಸುದ್ದಿ; ತುಮಕೂರು: ಶಾಸಕ ಎಸ್.ಆರ್.ಶ್ರೀನಿವಾಸ್ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ದಳಪತಿಗಳಿಗೆ ಮತ್ತೊಂದು ಶಾಕ್ ಎದುರಾಗಿದೆ. ಗುಬ್ಬಿ ಕ್ಷೇತ್ರದ ಪಟ್ಟಣ ಪಂಚಾಯತ್ ಸದಸ್ಯರು ಕಾಂಗ್ರೆಸ್ ಗೆ ಬಾಹ್ಯ ಬೆಂಬಲ ಕೋರಿದ್ದಾರೆ.
ಎಸ್.ಆರ್.ಶ್ರೀನಿವಾಸ್ ಗೆ ಗುಬ್ಬಿ ಪಟ್ಟಣ ಪಂಚಾಯತ್ ನ 9 ಜೆಡಿಎಸ್ ಸದಸ್ಯರು ಬಾಹ್ಯ್ ಬೆಂಬಲ ಘೋಷಿಸಿದ್ದಾರೆ. ನಮಗೆ ಜೆಡಿಎಸ್ ಪಕ್ಷದ ಮೇಲೆ ಯಾವುದೇ ಅಸಮಾಧಾನವಿಲ್ಲ. ಗುಬ್ಬಿ ಜೆಡಿಎಸ್ ಅಭ್ಯರ್ಥಿ ನಾಗರಾಜ್ ಮೇಲೆ ಮಾತ್ರ ಅಸಮಾಧಾನ. ವಿವಿಧ ಸಭೆ, ಸಮಾರಂಭಗಳಿಗೆ ಆಹ್ವಾನ ಮಾಡದೇ ನಿರ್ಲಕ್ಷ್ಯ ಮೆರೆದಿದ್ದಾರೆ ಎಂದು ಹೇಳಿದ್ದಾರೆ.
ನಾವು ಜೆಡಿಎಸ್ ನಲ್ಲಿದ್ದುಕೊಂಡೇ ಕಾಂಗ್ರೆಸ್ ಗೆ ಬಾಹ್ಯ ಬೆಂಬಲ ನೀಡುತ್ತೇವೆ ಎಂದು ಸದಸ್ಯರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ