ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸಿದ್ದು, ನವೆಂಬರ್ 1ರಿಂದ ಆರಂಭವಾಗಲಿರುವ ಪಂಚರತ್ನ ಯಾತ್ರೆ ಮೊದಲ ಹಂತದ ಪಟ್ತಿ ಬಿಡುಗಡೆ ಮಾಡಿದೆ.
ಬಿಜೆಪಿ ಜನಸಂಕಲ್ಪ ಯಾತ್ರೆ, ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಬೆನ್ನಲ್ಲೇ ಇದಿಗ ಜೆಡಿಎಸ್ ರಥ ಯಾತ್ರೆ ಆರಂಭಿಸಿದ್ದು, ನವೆಂಬರ್ 1ರಿಂದ ಮುಳಬಾಗಿಲಿನಿಂದ ಪಂಚರತ್ನ ರಥಯಾತ್ರೆ ಆರಂಭವಾಗಲಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಯಾತ್ರೆ ನಡೆಯಲಿದೆ.
ಉದ್ಯೋಗ, ಶಿಕ್ಷಣ, ನೀರಾವರಿ, ಕೃಷಿ, ಆರೋಗ್ಯ ಮೊದಲಾದ ವಿಚಾರ ಮುಂದಿಟ್ಟುಕೊಂಡು ಪಂಚರತ್ನ ಯಾತ್ರೆ ನಡೆಯಲಿದೆ.
* ನವೆಂಬರ್ 1ರಿಂದ ಕೋಲಾರ ಜಿಲ್ಲೆಯ ಮುಳಬಾಗಿಲುನಿಂದ ರಥಯಾತ್ರೆ ಆರಂಭವಾಗಲಿದೆ.
* ನವೆಂಬರ್ 6ರಿಂದ 10ರವರೆಗೆ ಚಿಕ್ಕಬಳ್ಳಾಪುರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.
* ನ.11ರಿಂದ 13ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಸಾಗಲಿದೆ.
* ನ.14ರಿಂದ 23ವರೆಗೆ ತುಮಕೂರು ಜಿಲ್ಲೆಯಲ್ಲಿ ರಥಯಾತ್ರೆ ಸಾಗಲಿದೆ.
* ನ.24ರಿಂದ 30ರವರೆಗೆ ಹಾಸನ ಜಿಲ್ಲೆಯಲ್ಲಿ ರಥಯಾತ್ರೆ ಸಾಗಲಿದೆ.
* ಡಿ.1ರಂದು ಕುಣಿಗಲ್ ಕ್ಷೇತ್ರದಲ್ಲಿ ಯಾತ್ರೆ ನಡೆಸಲಿದೆ.
* ಡಿ.2ರಿಂದ 5ರವರೆಗೆ ರಾಮನಗರ ಜಿಲ್ಲೆಯಲ್ಲಿ ರಥಯಾತ್ರೆ ಸಾಗಲಿದೆ.
ಮೊದಲ ಹಂತದಲ್ಲಿ ಒಟ್ಟು 35 ದಿನಗಳ ಕಾಲ ಪಂಚರತ್ನ ಯಾತ್ರೆ ನಡೆಯಲಿದೆ. ಈ ಯಾತ್ರೆ ವೇಳೆಯೇ ಜೆಡಿಎಸ್ ಅಭ್ಯರ್ಥಿ ಘೋಷಿಸಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ