Latest

*ಚುನಾವಣಾ ಪ್ರಚಾರದ ನೆಪದಲ್ಲಿ ಮಹಿಳೆಯರನ್ನು ಮಂಚಕ್ಕೆ ಕರೆದ ಅಭ್ಯರ್ಥಿ; ಕ್ಷೇತ್ರಾದ್ಯಂತ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ರಾಜಕೀಯ ಪಕ್ಷಗಳಿಂದ ಅಬ್ಬರದ ಪ್ರಚಾರ ಆರಂಭವಾಗಿದೆ. ಈ ನಡುವೆ ಜೆಡಿಎಸ್ ಅಭ್ಯರ್ಥಿಯೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಚುನಾವಣಾ ಪ್ರಚಾರದ ನೆಪದಲ್ಲಿ ಮಂಚಕ್ಕೆ ಕರೆದಿದ್ದಾರೆ ಎನ್ನಲಾಗಿದೆ.

ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಪ್ರಚಾರದ ನೆಪವೊಡ್ಡಿ ಗೋವಿಂದರಾಜು ಮಹಿಳೆಯರನ್ನು ಮಂಚಕ್ಕೆ ಕರೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಗೋವಿಂದರಾಜುವನ್ನು ಪಕ್ಷದಿಂದ ವಜಾಗೊಳಿಸುವಂತೆ ಆಗ್ರಹಿಸಿ ಮಹಿಳೆಯರು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ಗೋ ಬ್ಯಾಕ್ ಗೋವಿಂದರಾಜು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಗೆ ಹೆಣ್ಣು ಮಕ್ಕಳ ಮೇಲೆ ಗೌರವ ಇದ್ದರೆ ಗೋವಿಂದರಾಜುವನ್ನು ತಕ್ಷಣ ಪಕ್ಷದಿಂದ ವಜಾಗೊಳಿಸಲಿ ಎಂದು ಆಗ್ರಹಿಸಿದ್ದಾರೆ.

ಗೋವಿಂದರಾಜು ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ರೇಷ್ಮಾ ಎಂಬ ಮಹಿಳೆ ದೂರು ನೀಡಿದ್ದರು. ಅಲ್ಲದೇ ಗೋವಿಂದರಾಜು ಅಶ್ಲೀಲವಾಗಿ ಮಾತನಾಡಿರುವ ಆಡಿಯೋ ಕೂಡ ವೈರಲ್ ಆಗಿತ್ತು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಗೋವಿಂದರಾಜು ವಿರುದ್ಧ ಮಹಿಳೆಯರು ಸಿಡಿದೆದ್ದಿದ್ದಾರೆ.

Home add -Advt


https://pragati.taskdun.com/lakshmana-savadireactionb-s-yedyurappa/
https://pragati.taskdun.com/nrityollasa-program-organised-today-in-belagavi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button