ಪ್ರಗತಿವಾಹಿನಿ ಸುದ್ದಿ; ರಾಮನಗರ: 2023ರ ವಿಧಾನಸಭಾ ಚುನಾವನೆಗೆ ಜೆಡಿಎಸ್ ಸಿದ್ಧತೆ ಆರಂಭಿಸಿದ್ದು, ಸೆ.27ರಿಂದ 4 ದಿನಗಳ ಕಾಲ ಜೆಡಿಎಸ್ ಕಾರ್ಯಾಗಾರ ಆರಂಭಿಸಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಮನಗರದ ಕೇತಗಾನಹಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ಸಂಘಟನೆ ದೃಷ್ಟಿಯಿಂದ ಕಾರ್ಯಾಗಾರ ಆಯೋಜನೆ ಮಾಡಲಾಗಿದೆ. ಮೊದಲ ಎರಡು ದಿನ ಶಾಸಕ ಸ್ಥಾನದ ಆಕಾಂಕ್ಷಿಗಳು, ಜೆಡಿಎಸ್ ಶಾಸಕರಿಗೆ ಕಾರ್ಯಾಗಾರ ನಡೆಯುತ್ತದೆ. ಮೂರನೇ ದಿನ ಮಹಿಳೆಯರಿಗೆ ತರಬೇತಿ ನಿಡಲಾಗುತ್ತದೆ. ಬೂತ್ ಮಟ್ಟದಲ್ಲಿ ಮಹಿಳಾ ಸಂಘಟನೆ ಮಾಡುವ ಬಗ್ಗೆ ತರಬೇತಿ ನಿಡಲಾಗುತ್ತದೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪಕ್ಷ ಸಂಘಟನೆಗೆ ಚಾಲನೆ ನೀದಲಿದ್ದಾರೆ. ತಮ್ಮ ರಾಜಕೀಯ ಅನುಭವ ಹಂಚಿಕೊಳ್ಳಲಿದ್ದಾರೆ. 7 ಸೆಷನ್ ನಲ್ಲಿ ಕಾರ್ಯಾಗಾರ ನಡೆಯಲಿದೆ. ಯಾವುದೇ ಪಕ್ಷದ ಜೊತೆ ಜೆಡಿಎಸ್ ಹೊಂದಾಣಿಕೆ ಇಲ್ಲ ಸ್ವತಂತ್ರವಾಗಿ ಅಧಿಕಾರ ಪಡೆಯುವುದೇ ಜೆಡಿಎಸ್ ಗುರಿ ಎಂದು ಹೇಳಿದರು.
ಪ್ರತಿಭಟನೆ ಹೆಸರಲ್ಲಿ ತೊಂದರೆ ಬೇಡ; ರೈತ ಮುಖಂಡರಿಗೆ ಸಿಎಂ ಮನವಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ