
ಪ್ರಗತಿವಾಹಿನಿ ಸುದ್ದಿ: ಜೀಪ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಯಡವನಹಳ್ಳಿಯಲ್ಲಿ ನಡೆದಿದೆ. ಸರ್ಕಾರಿ ಜೀಪ್ ಹಾಗೂ ಕಿಯಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಕಾರಿನಲ್ಲಿದ್ದವರು ಕಾರಿನಿಂದ ಇಳಿದು ಬಚಾವ್ ಆಗಿದ್ದಾರೆ.
ನೋಡನೋಡುತ್ತಿದ್ದಂತೆ ಕಾರು ಸುಟ್ಟು ಕರಕಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.




