Latest

*ಜೆಸ್ಕಾಂ ಅಧಿಕಾರಿಗಳ ಕಿರುಕುಳ: ವಿದ್ಯುತ್ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಜೆಸ್ಕಾಂ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವಿದ್ಯುತ್ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಣಿಗೇರದಲ್ಲಿ ನಡೆದಿದೆ.

ಮುನಿರಾಬಾದ್ ಜೆಸ್ಕಾಂ ಅಧಿಕಾರಿಗಳ ಕಿರುಕುಳದಿಂದ ನೊಂದು ವಿದ್ಯುತ್ ಗುತ್ತಿಗೆದಾರ ಡೆತ್ ನೋಟ್ ಬರೆದಿಟ್ಟು ಆಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಜಯರಾಂ ಆತ್ಮಹತ್ಯೆಗೆ ಯತ್ನಿಸಿರುವ ವಿದ್ಯುತ್ ಗುತ್ತಿಗೆದಾರ.

Home add -Advt

ವಿಷಯ ತಿಳಿಯುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸಿಡ್ ಸೇವನೆಗೂ ಮುನ್ನ ಜಯರಾಂ ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಮುನಿರಾಬಾದ್ ಜೆಸ್ಕಾಂ ಅಧಿಕಾರಿಗಳು ತನಗೆ ಕಿರುಕುಳ ನೀಡುತ್ತಿರುದಾಗಿ ಉಲ್ಲೇಖಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button