
ಪ್ರಗತಿವಾಹಿನಿ ಸುದ್ದಿ: ಶಾಲೆಯ ಮೇಲೆ ತರಬೇತಿ ವಿಮಾನವೊಂದು ಪತನಗೊಂಡಿರುವ ಘಟನೆ ಬಾಂಗ್ಲಾದೇಶದ ಢಾಕಾದಲ್ಲಿ ನಡೆದಿದೆ.
ಎಫ್-7 ಜೆಟ್ ವಿಮಾನ ಢಾಕಾದ ಶಾಲೆಯ ಮೇಲೆ ಪತನವಾಗಿದ್ದು, ಧಗ ಧಗನೆ ಬೆಂಕಿ ಹೊತ್ತಿ ಉರಿದಿದೆ. ವಿದ್ಯಾರ್ಥಿಗಳು, ಶಾಲೆಯ ಸಿಬ್ಬಂದಿಗಳು ದಿಕ್ಕಾಪಾಲಾಗಿ ಓಡಿದ್ದಾರೆ. ಘಟನಾಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ.
ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ರಕ್ಷಣಾ ಕಾರ್ಯಾಚರಣೆ ನಡೆದಿದೆ.