
ಪ್ರಗತಿವಾಹಿನಿ ಸುದ್ದಿ: ಶಾಲೆಯ ಮೇಲೆ ವಾಯುಪಡೆಯ ತರಬೇತಿ ವಿಮಾನ ಪತನಗೊಂಡು ಬೆಂಕಿ ಹೊತ್ತಿಕೊಂಡ ಘಟನೆ ಢಾಕಾದಲ್ಲಿ ನಡೆದಿದ್ದು, ದುರಂತದಲ್ಲಿ 19ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಹಲವು ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ ಸುಟ್ಟ ಗಾಯಗಳಿಂದ ಗಂಭಿರವಾಗಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಬಾಂಗ್ಲಾ ವಾಯುಪಡೆಯ F-7 ಜೆಟ್ ವಿಮಾನ ತರಬೇತಿ ನಡೆಸುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಶಾಲೆಯ ಮೇಲೆ ಪತನಗೊಂಡಿದೆ. ಪತನಗೊಂಡ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ೧೯ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸುಟ್ಟು ಗಾಯಗೊಂಡಿರುವ ವಿದ್ಯಾರ್ಥಿಗಳು ಜೀವ ಉಳಿಸಿಕೊಳ್ಳಲು ಓಡಾಡುತ್ತಿದ್ದ ದೃಶ್ಯ ಕರಳುಹಿಂಡುವಂತಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಾವು-ನೋವು ಹೆಚ್ಚಾಗುವ ಸಾಧ್ಯತೆ ಇದೆ.