*ಜನವಸತಿ ಪ್ರದೇಶದ ರಸ್ತೆಗೆ ಅಪ್ಪಳಿಸಿದ ಜೆಟ್ ವಿಮಾನ*: *9 ಮಂದಿ ಸಾವು*

ಪ್ರಗತಿವಾಹಿನಿ ಸುದ್ದಿ: ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ಬಿಸಿನೆಸ್ ಜೆಟ್ ವಿಮಾನವೊಂದು ಜನವಸತಿ ಪ್ರದೇಶದ ಸಮೀಪ ರಸ್ತೆಗೆ ಅಪ್ಪಳಿಸಿ ಪತನಗೊಂಡಿರುವ ಘಟನೆ ಅಮೆರಿಕದ ಫ್ಲೋರಿಡಾ ರಾಜ್ಯದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ವಿಮಾನದಲ್ಲಿದ್ದ 9 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಟೆಕ್ಸಾಸ್‌ನ ಆಸ್ಟಿನ್‌ನಿಂದ ಬಹಾಮಾಸ್‌ಗೆ ತೆರಳುತ್ತಿದ್ದ ಬಿಸಿನೆಸ್ ಜೆಟ್ ವಿಮಾನವು ಹಾರಾಟದ ವೇಳೆ ನಿಯಂತ್ರಣ ಕಳೆದುಕೊಂಡು ಪಾಮ್ ಬೀಚ್ ಕೌಂಟಿಯ ಕ್ರೆಸ್ಟ್ ಹ್ಯಾವೆನ್ ಸಮೀಪ ಪತನಗೊಂಡಿದೆ. ವಿಮಾನ ನೆಲಕ್ಕೆ ಅಪ್ಪಳಿಸುತ್ತಿದ್ದಂತೆ ಭಾರೀ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ ವಿಮಾನದಲ್ಲಿದ್ದವರು … Continue reading *ಜನವಸತಿ ಪ್ರದೇಶದ ರಸ್ತೆಗೆ ಅಪ್ಪಳಿಸಿದ ಜೆಟ್ ವಿಮಾನ*: *9 ಮಂದಿ ಸಾವು*