National

*6 ನಕ್ಸಲರು ಎನ್ ಕೌಂಟರ್ ಗೆ ಬಲಿ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಮೀಸಲು ಪಡೆ, ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆ ಎನ್ ಕೌಂಟರ್ ಗೆ 6 ನಕ್ಸಲರು ಬಲಿಯಾಗಿದ್ದಾರೆ.

ಜಾರ್ಖಂಡ್ ನ ಬೊಕಾರೊ ಜಿಲ್ಲೆಯ ಲಾಲ್ಪಾನಿಯಾ ಪ್ರದೇಶದ ಲುಗು ಬೆಟ್ಟದಲ್ಲಿ ನಕ್ಸಲರ ವಿರುದ್ಧ ಕೇಂದ್ರ ಮೀಸಲು ಪಡೆ, ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಆರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button