ಪ್ರಗತಿವಾಹಿನಿ ಸುದ್ದಿ: ಜಾರ್ಖಂಡ್ ಸಚಿವರೊಬ್ಬರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಜಾರ್ಖಂಡ್ ಸಚಿವ ಚಂಪೈ ಸೊರೆನ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ದುರಂತದಲ್ಲಿ ಚಾಲಕ ಕಾನ್ಸ್ ಟೇಬಲ್ ವಿನಯ್ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐವರು ಯೋಧರು ಗಾಯಗೊಂಡಿದ್ದಾರೆ.
ಸಚಿವ ಚಂಪೈ ಸೊರೆನ್ ಅವರನ್ನು ಅವರ ಮನೆಗೆ ಬಿಟ್ಟು ವಾಪಾಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಎಸ್ಕಾರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ