Film & EntertainmentLatest

*ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜಾನಿ ಮಾಸ್ಟರ್ ವಿರುದ್ಧ 22 ವರ್ಷದ ಯುವತಿ, ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು. ಅಲ್ಲದೇ ಜಾನಿ ಮಾಸ್ಟರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈದರಾಬಾದ್ ಪೊಲೀಸರು ಗೋವಾದಲ್ಲಿ ಜಾನಿ ಮಾಸ್ಟರ್ ಅವರನ್ನು ಬಂಧಿಸಿದ್ದಾರೆ.

ಜಾನಿ ಮಾಸ್ಟರ್ ತೆಲುಗು, ತಮಿಳು, ಕನ್ನಡದ ಸ್ಟಾರ್ ಹಿರೋಗಳಿಗೆ ನೃತ್ಯ ನಿರ್ದೇಶನ ಮಾಡಿದ್ದರು. ತಮಿಳಿನ ಕಾವಾಲಯ್ಯ, ಬೀಸ್ಟ್, ಕನ್ನಡದಲ್ಲಿ ಪುನೀತ್ ರಾಜ್ ಕುಮಾರ್, ಕಿಚ್ಚ ಸುದೀಪ್ ಸಿನಿಮಾಗಳಿಗೂ ಜಾನಿ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದರು.


Related Articles

Back to top button