ಜೆಎನ್‍ಯು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳ ಅಟ್ಟಹಾಸ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಜೆಎನ್‍ಯು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ನುಗ್ಗಿದ ದುಷ್ಕರ್ಮಿಗಳ ಗುಂಪೊಂದು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ.

ಘಟನೆಯಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಐಶಿ ಘೋಷ್, ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಸೇರಿದಂತೆ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜೆಎನ್​​ಯು ಕ್ಯಾಂಪಸ್​​ನಲ್ಲಿ ಶಬರಮತಿ ಹಾಸ್ಟೆಲ್​​ ಬಳಿ ಐಶ್​ ಘೋಷ್​​​ ತನ್ನ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕಿಡಿಗೇಡಿಗಳ ಗುಂಪು ಹಲ್ಲೆ ನಡೆಸಿದ್ದಾರೆ 1000ಕ್ಕೂ ಹೆಚ್ಚು ಮಂದಿ ಗೂಂಡಾಗಳ ಗುಂಪು ಕ್ಯಾಂಪಸ್ ಒಳಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಗವಾಗಿ ಹಲ್ಲೆ ನಡೆಸಿ, ವಾಹನಗಳನ್ನು ಧ್ವಂಸಗೊಳಿಸಿವೆ. ಈ ಕೃತ್ಯ ಸಿಸಿಟಿವಿಗಳಲ್ಲೂ ಸೆರೆಯಾಗಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜೆಎನ್​​ಯು ವಿದ್ಯಾರ್ಥಿ ಸಂಘ, ಎಬಿವಿಪಿ ಕಾರ್ಯಕರ್ತರೇ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಸಂಘದ ಮುಖ್ಯಸ್ಥರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಿದೆ. ಐಶ್​ ಘೋಷ್​​ ಸ್ಥಿತಿ ಗಂಭೀರವಾಗಿದ್ದು, ಘೋಷ್​​​ ಳನ್ನು ಕಿಡಿಗೇಡಿಗಳು ಹಾಕಿ ಬ್ಯಾಟ್​ಗಳಿಂದ ಹಲ್ಲೆ ಮಾಡಿರುವುದು ವಿಡಿಯೋದಲ್ಲಿ ರೆಕಾರ್ಡ್​ ಆಗಿದೆ. ಸದ್ಯ ಜೆಎನ್‌ಯು ಕ್ಯಾಂಪಸ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಬಿಗಿ ಪೊಲೀಸ್ ಬಂದೋಬಸ್ತ್​​ ಏರ್ಪಡಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button