ಹಲ್ಲೆಗೊಳಗಾದ ಜೆಎನ್​​​ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್ ವಿರುದ್ಧವೇ ಎಫ್​​ಐಆರ್​​ ದಾಖಲು

ಪ್ರಗತಿವಾಹಿನಿ ಸುದ್ದಿ: ನವದೆಹಲಿ: ದೆಹಲಿಯ ಜೆಎನ್​​ಯು ವಿಶ್ವವಿದ್ಯಾಲಯದ ಕ್ಯಾಂಪಸ್​​ನೊಳಗೆ ಮುಸುಕುಧಾರಿ ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ತೀವ್ರ ಹಲ್ಲೆಗೊಳಗಾದ ಜೆಎನ್​​​ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್​​​ ಸೇರಿದಂತೆ 19 ಮಂದಿ ವಿದ್ಯಾರ್ಥಿಗಳ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ.

ಮುಸುಕುಧಾರಿಗಳು ಕ್ಯಾಂಪಸ್​​ಗೆ ನುಗ್ಗಿ ಹಿಂಸಾಚಾರ ನಡೆಸುವ ಮುನ್ನ ದಿನ ಜನವರಿ 4ನೇ ತಾರಿಕು ಜೆಎನ್​​ಯು ಸರ್ವರ್‌ ಕೊಠಡಿಯಲ್ಲಿ ಐಶೆ ಘೋಷ್​​​​​ ಸೇರಿದಂತೆ 19 ಮಂದಿ ದಾಂದಲೆ ನಡೆಸಿದರು. ಈ ಆರೋಪದ ಮೇಲೆ ಐಶೆ ಘೋಷ್​​​ ಮತ್ತಿತರ ವಿರುದ್ಧ ದೆಹಲಿ ಪೊಲೀಸರು ಎಫ್​​ಐಆರ್​​ ದಾಖಲಿಸಿಕೊಂಡಿದ್ದಾರೆ.

ಜೆಎನ್​​ಯು ಕ್ಯಾಂಪಸ್​​ನಲ್ಲಿ ಹಿಂಸಾಚಾರ ತಡೆಯಲು ಪೊಲೀಸರು ಪ್ರಯತ್ನಿಸಲಿಲ್ಲ ಎಂಬ ಆರೋಪಗಳು ಕೇಳಿ ಬಂದಿತ್ತು. ಅಲ್ಲದೇ ದೇಶಾದ್ಯಂತ ತೀವ್ರ ಚರ್ಚೆಗೂ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಈಗ ಹಲ್ಲೆಗೊಳಗಾದ ಐಶೆ ಘೋಷ್​​​ ಸೇರಿದಂತೆ 19 ಮಂದಿ ವಿದ್ಯಾರ್ಥಿಗಳ ವಿರುದ್ಧ ಎಫ್​​ಐಆರ್ ದಾಖಲಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಅಲ್ಲದೇ ಪೊಲೀಸರ ಕ್ರಮದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಜೆಎನ್​​ಯು ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳ ಗುಂಪೊಂದು ನಡೆಸಿದ ದಾಳಿ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್​​ ಸೇರಿದಂತೆ ಎಡಪಕ್ಷಗಳು ಬೀದಿಗಿಳಿದು ಪ್ರತಿಭಟಿಸುತ್ತಿವೆ. ಈ ಬೆನ್ನಲ್ಲೇ ದೆಹಲಿ ಪೊಲೀಸರು​ ಪ್ರಕರಣ ಸಂಬಂಧ ಕಿಡಿಗೇಡಿಗಳ ಗುಂಪಿನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆಯಾದರೂ ಈ ವರೆಗೆ ಯಾರನ್ನು ಬಂಧಿಸಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button