
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ., ಡಿಪ್ಲೋಮಾ, ಬಿ.ಎಡ್., ಡಿ.ಎಡ್, ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಫೆಬ್ರುವರಿ.೧೯ ರಂದು ಮುಂಜಾನೆ ೧೦ ಗಂಟೆ ೩೦ ನಿಮಿಷದಿಂದ ಸಾಯಂಕಾಲ ೪ ಗಂಟೆ ೩೦ ನಿಮಿಷದ ವರೆಗೆ ಉದ್ಯೋಗಮೇಳವನ್ನು (JOBFAIR) ಬೆಳಗಾವಿ ಸುವರ್ಣ ವಿಧಾನಸೌಧ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಆಯೋಜಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು :
https://www.sites.google.com/view/dsdobelagavi
ಈ ವೆಬ್ಸೈಟ್ನಲ್ಲಿ ಫೆಬ್ರುವರಿ.೧೮ ಸಾಯಂಕಾಲ ೫ ಗಂಟೆ ೩೦ ನಿಮಿಷದ ವರೆಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.
ಸದರಿ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ
https://www.sites.google.com/view/dsdobelagavi
ವೈಬ್ಸೈಟ್ ನ್ನು ಸಂಪರ್ಕಿಸಬಹುದು ಎಂದು ಬೆಳಗಾವಿ ಜಿಲ್ಲಾಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ಉದ್ಯೋಗಾವಕಾಶ; ಅರ್ಜಿ ಆಹ್ವಾನ