
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ ವತಿಯಿಂದ ನವೆಂಬರ 28 (ಶುಕ್ರವಾರ) ಮುಂಜಾನೆ 10.00 ರಿಂದ ಮದ್ಯಾಹ್ನ 2.00 ಗಂಟೆಯವರೆಗೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯ ಸರದಾರ ಆವರಣ ಬೆಳಗಾವಿ ಇಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಆಸಕ್ತ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆ ಹೊಂದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು https://tinyurl.com/2tdpad43 ಈ ವೆಬ್ ಸೈಟ್ನಲ್ಲಿ ಹೆಸರನ್ನು ನೋಂದಾಯಿಸಿ ಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 7975856566, 8073124106 ಇವರನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬೆಳಗಾವಿ, ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


