
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರಕಾರಿ ಪ್ರಥಮ ದರ್ಜೆ ಮಹಿಳಾ ಪದವಿ ಕಾಲೇಜು ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಂಯುಕ್ತಾಶ್ರಯದಲ್ಲಿ ಶುಕ್ರವಾರ (ನ.28) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವೆರೆ ನಗರದ ಸರ್ಕಾರಿ ಸರದಾರ್ ಹೈ ಸ್ಕೂಲ್ ಆವರಣದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವೀಧರರಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ https://forms.gle/vGEvybCbH1fdv7gGA ಮೂಲಕ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು- [email protected] ಗೆ Resume ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳು ಉಚಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಪ್ಲೇಸೈಂಟ್ ಸಂಯೋಜಕರಾದ ಡಾ. ಶಂಶುದ್ದೀನ್ ಎಂ. ನದಾಫ್ ಮೊಬೈಲ್ ಸಂಖ್ಯೆ: 9449151794 ಅಥವಾ 8073124146 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

