
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ, ಹಾಗೂ ಶ್ರೀ ಮಲ್ಲಿಕಾರ್ಜುನ ಮಹಾವಿದ್ಯಾಲಯ ಕಾಗವಾಡ ಇವರ ಸಹಯೋಗದಲ್ಲಿ ಮಾರ್ಚ್ 23, 2025 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಶ್ರೀ ಶಿವಾನಂದ ಮಹಾವಿದ್ಯಾಲಯ, ಬಸ್ ಸ್ಟ್ಯಾಂಡ್ ಹತ್ತಿರ, ಕಾಗವಾಡದಲ್ಲಿ “ಉದ್ಯೋಗ ಮೇಳ” ಆಯೋಜಿಸಲಾಗಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಮತ್ತು ಬಿ.ಇ, ಡಿ.ಎಡ್, ಬಿಎಡ್, ಎಮ್.ಎ, ಎಮ್‌ಕಾಂ, ಎಮ್.ಬಿ.ಎ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ “ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು https://tinyurl.com/2n5w9wxu ಈ ವೆಬ್‌ಸೈಟ್‌ನಲ್ಲಿ ಹೆಸರನ್ನು ನೋಂದಾಯಿಸಿ ಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ: 7975856566, 9341696034, 9483150645 ಇವರನ್ನು ಕಛೇರಿ ಸಮಯದಲ್ಲಿ ಮಾತ್ರ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.