National

*ಕೊನೆಯುಸಿರಿರುವವರೆಗೂ ಹೋರಾಡಿ ವೀರ ಮರಣ ಹೊಂದಿದ ಯೋಧ*

ಪ್ರಗತಿವಾಹಿನಿ ಸುದ್ದಿ: ಪಾಕಸ್ತಾನ ಕಳೆದ ಎರಡು ದಿನಗಳಿಂದ ಪೂಂಚ್ ಸೆಕ್ಟರ್ ನಲ್ಲಿ ಶೆಲ್ ದಾಳಿ ನಡೆಸುತ್ತಿದ್ದು, ಈ ದಾಳಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ವೀರ ಮರಣವನ್ನಪ್ಪಿದ್ದಾರೆ.

ಎರಡು ದಿನಗಳಿಂದ ನಿರಂತರವಾಗಿ ಶೆಲ್ ದಾಳಿ ಮಾಡಲಾಗುತ್ತಿದೆ. ಈ ದಾಳಿಯಲ್ಲಿ ಇದುವರೆಗೆ 31 ಜನ ಅಮಾಯಕರು ಮೃತಪಟ್ಟಿದ್ದಾರೆ.

ಪಾಕ್ ಈ ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡುವ ವೇಳೆ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಅವರಿಗೆ ಗುಂಡೇಟು ತಗುಲಿದ್ದು ಕೊನೆಯುಸಿರಿರುವವರೆಗೂ ಧೈರ್ಯದಿಂದ ಹೋರಾಡಿ ವೀರ ಮರಣವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ದೃಢಪಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button