Kannada NewsLatest

*ಪದವಿಧರರಿಗೆ ಉದ್ಯೋಗಾವಕಾಶ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವತಿಯಿಂದ ಫೆ. 10 ರಂದು ಬೆಳಿಗ್ಗೆ 10.30 ರಿಂದ ಮದ್ಯಾಹ್ನ1.30 ಗಂಟೆಯವರೆಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಹಾಗೂ ಡಿಪ್ಲೋಮಾ (ಬಿಇ) ಯಾವುದೇ ಇನ್ನಿತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ “ನೇರ ಸಂದರ್ಶನ” ವನ್ನು ಶ್ರೀನಗರ ಗಾರ್ಡನ್ ಹತ್ತಿರ ಡಾ. ಶಿವಬಸವ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು https://forms.gle/1jDyte ಈ ವೆಬ್‌ಸೈಟ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.

ಸದರಿ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಮೇಲ್ಕಂಡ ವೈಬ್‌ಸೈಟಿಗೆ ಭೇಟಿ ನೀಡಬಹುದು, ಹಾಗೂ ಮೊಬೈಲ್ ಸಂಖ್ಯೆ: 8147685479/ 8105234686 ಗೆ ಸಂಪರ್ಕಿಸಬಹುದು, ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*ನಿಪ್ಪಾಣಿ-ಶಿರಗುಪ್ಪಿ-ಶೇಂಡೂರ ರಸ್ತೆಯ ಕಾಮಗಾರಿಗೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ*

Home add -Advt

 

https://pragati.taskdun.com/nippani-shiraguppi-shenduraroadshashikala-jolle/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button