Karnataka NewsLatest

ಮುಂಗಾರು ಪ್ರವೇಶ: 3 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಕರಾವಳಿಯಲ್ಲಿ 4 ದಿನ ಹೈ ಅಲರ್ಟ್ ಘೋಷಿಸಲಾಗಿದೆ.

ಶನಿವಾರ ಸಂಜೆ ಹಾಗೂ ಕೆಲವೆಡೆ ಭಾನುವಾರ ಮುಂಜಾನೆಯಿಂದ ಅನೇಕ ಕಡೆ ನಿರಂತರ ಮಳೆ ಸುರಿಯುತ್ತಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಮಳೆಯಾಗುತ್ತಿದೆ. ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳಲ್ಲೂ ಮಳೆಯಾಗುತ್ತಿದೆ. ಅನೇಕ ಕಡೆ ಮರಗಳು ಬಿದ್ದಿವೆ. ವಿದ್ಯುತ್ ಸಂಪರ್ಕ ಕಡಿತವಾಗಿದೆ.

ಕರಾವಳಿಯ 3  ಜಿಲ್ಲೆಗಳಲ್ಲಿ ಮುಂದಿನ 4 ದಿನ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು 3 -4 ದಿನ ಮಳೆಯಾಗಲಿದ್ದು, ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡಗಳಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ.

ಕರ್ನಾಟಕ, ಕೇರಳ ಹಾಗೂ ಲಕ್ಷದ್ವೀಪದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು.  45ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Home add -Advt

ಬೆಳಗಾವಿ: ಕೆವೈಸಿ ಅಪ್ ಡೇಟ್ ಮಾಡುವುದಾಗಿ ಹೇಳಿ 10 ಲಕ್ಷ ವಂಚಿಸಿದ ದುಷ್ಕರ್ಮಿಗಳು

 

Related Articles

Back to top button