ಪ್ರಗತಿವಾಹಿನಿ ಸುದ್ದಿ: ರಾಮದುರ್ಗ ತಾಲೂಕಿನ ಕದಾಂಪುರ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ-೧ (ವಿಆರ್ಡಬ್ಲೂö್ಯ) ಹುದ್ದೆಗೆ ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನರಯಡಿ ಮಾಸಿಕ ೯೦೦೦ ಗೌರವ ಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ್ ೪೦% ಮತ್ತು ಅದಕ್ಕಿಂತ ಹೆಚ್ಚಿನ ವಿಕಲತೆ ಪ್ರಮಾಣ ಹೊಂದಿರಬೇಕು. ಅರ್ಜಿದಾರರು ಆಯಾ ಗಾಮ ಪಂಚಾಯತಿ ವ್ಯಾಪ್ತಿಗೊಳಪಟ್ಟಿರಬೇಕು. ಕನಿಷ್ಟ ಎಸ್ಎಸ್ಎಲ್ಸಿ ಉರ್ತ್ತಿಣರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕನಿಷ್ಟ ೧೮ ರಿಂದ ೪೫ ವರ್ಷ ವಯೋಮಿತಿಯಲ್ಲಿರಬೇಕು. ವಿಕಲಚೇತನ ಮಹಿಳೆ, ಪ.ಜಾತಿ ಮತ್ತು ಪ. ಪಂಗಡದ ಅಭ್ಯರ್ಥಿಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಜ್ಞಾನ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ದಿನಾಂಕ:೨೩-೦೧-೨೦೨೫ ರ ಸಂಜೆ ೫ ಗಂಟೆಯೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ರಾಮದುರ್ಗ ತಾಲೂಕ ಪಂಚಾಯತ ಕಾರ್ಯಲಯಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸವದತ್ತಿ ತಾಲೂಕಿನ ಎಂಆರ್ಡಬ್ಲೂö್ಯ ಅಧಿಕಾರಿಗಳ ದೂರವಾಣಿ:೯೯೦೧೬೩೩೫೦೮ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ