
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಆಸ್ಪತ್ರೆ ಬೆಳಗಾವಿ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ “ಸಖಿ” ಒನ್ ಸ್ಟಾಪ್ ಕೇಂದ್ರದಲ್ಲಿ ಖಾಲಿ ಇರುವ ಕೇಸ್ ವರ್ಕರ್ (ಸಮಾಜ ಕಾರ್ಯಕರ್ತೆ) ಹುದ್ದೆಯನ್ನು ನೇರಗುತ್ತಿಗೆ (Service Contract) ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 40 ವಯೋಮಿತಿ ಇರಬೇಕು. ಅಭ್ಯರ್ಥಿಗಳು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿ ನಗರ ಬೆಳಗಾವಿ ಇವರಿಂದ ನಿಗದಿತ ನಮೂನೆಯ ಅರ್ಜಿ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಫೆಬ್ರುವರಿ 2, 2026 ರೊಳಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಛೇರಿಗೆ ಸಲ್ಲಿಸಬಹುದಾಗಿದೆ.
ಸದರಿ ಹುದ್ದೆಗಳು ತಾತ್ಕಾಲಿಕವಾಗಿದ್ದು, ಕಾಲಾವಧಿ 11 ತಿಂಗಳುಗಳಾಗಿರುತ್ತವೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0831-2407236 ಗೆ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೀಯಲ್ಲಿ ತಿಳಿಸಿದ್ದಾರೆ.




