Latest

ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪೋಸ್ಟ್ ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿದ್ದರೆ ಸಾಕು ಕೈ ತುಂಬ ಸಂಬಳದ ಜೊತೆ ಒಳ್ಳೆ ಉದ್ಯೋಗ ನಿಮಗೆ ದೊರೆಯುತ್ತದೆ.

ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ಎನ್ ರೋಲ್ ಫಾಲೋವರ್/ಸಫೈವಾಲಾ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 18 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ/ಐಟಿಐ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ 21,700-69,100 ರೂ ವೇತನ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ವೃತ್ತಿಪರ ಕೌಶಲ್ಯ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಶಾರ್ಟ್‌ಲಿಸ್ಟ್ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಮಾ.30 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್ ನ ಅಧಿಕೃತ ವೆಬ್ ಸೈಟ್  http://joinindiancoastguard.cdac.in

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button