ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗ ಜಿಲ್ಲೆಯಲ್ಲಿರುವ ವಿಶ್ವಪ್ರಸಿದ್ಧ ಪ್ರವಾಸಿ ತಾಣ ಜೋಗ ಜಲಪಾತಕ್ಕೆ ತೆರಳುವ ಪ್ರವಾಸಿಗರಿಗೆ ಜಿಲ್ಲಾಡಳಿತ ಬಿಗ್ ಶಾಕ್ ನೀಡಿದೆ. ಜೋಗ್ ಫಾಲ್ಸ್ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಜೋಗಜಲಪಾತ ಬಳಿ ಅಭಿವೃದ್ಧಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ 3 ತಿಂಗಳ ಕಾಲ ಜೋಗ ಜಲಪಾತ ವೀಕ್ಷಣೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಜೋಗದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಜನವರಿ 1ರಿಂದ ಮಾರ್ಚ್ 15ರವರೆಗೆ 3 ತಿಂಗಳ ಕಾಲ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಣೆ ಹಾಗೂ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಅಭಿವೃದ್ಧಿ ಕಾಮಗಾರಿ ವೇಳೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ