ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ 3 ತಿಂಗಳ ಕಾಲ ಜಿಲ್ಲಾಡಳಿತ ನಿರ್ಬಂಧ ಹೇರಿದ್ದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಭಾರಿ ನಿರಾಸೆಯಾಗಿತ್ತು.
ಇದೀಗ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಪ್ರವಾಸಿಗರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಜೋಗ ಜಲಪಾತ ವೀಕ್ಷಣೆಗೆ ಅವಕಾಶ ನೀಡಿದೆ.
ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯದ್ವಾರವನ್ನು ಹೊರತುಪಡಿಸಿ ಉಳಿದೆಲ್ಲ ಪರ್ಯಾಯ ಸ್ಥಳಗಳಿಂದ ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಿಸಲು ಜಿಲ್ಲಾಡಳಿತ ಅನುಮತಿ ನೀಡಿದೆ.
ಪ್ರವಾಸಿಗರು ವ್ಯೂ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬೈ ಬಂಗಲೆ ಮೊದಲಾದೆಡೆಯಿಂದ ಜಲಪಾತವನ್ನು ವೀಕ್ಷಿಸಬಹುದು ಎಂದು ತಿಳಿಸಿದೆ.
ಪ್ರತಿವರ್ಷ ಡಿಸೆಂಬರ್ ಕೊನೇ ವಾರದಿಂದ ಜೋಗ ಜಲಪಾತಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿತ್ತು. ಆದರೆ ಈಬಾರಿ ನಿರ್ಬಂಧ ವಿಧಿಸಿದ್ದರಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಆದರೆ ಹೊಸ ವರ್ಷಕ್ಕೆ ಪ್ರವಾಸಿಗರಿಗೆ ನಿರ್ಬಂಧ ತೆರವುಗೊಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ