Belagavi NewsBelgaum News
*ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಜೊಲ್ಲೆ ದಂಪತಿಗೆ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ಬಹು ಕಾತುರದಿಂದ ಕಾಯುತ್ತಿರುವ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ಮುಹೂರ್ತ ಪಿಕ್ಸ್ ಆಗಿದ್ದು. ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಜೊಲ್ಲೆ ದಂಪತಿಗೆ ಆಹ್ವಾನ ಬಂದಿದೆ. ಚಿಕ್ಕೋಡಿ ತಾಲೂಕಿನ ಯಕ್ಸಂಬಾ ನಿವಾಸದಲ್ಲಿ ದಂಪತಿಗಳು ಆಹ್ವಾನ ಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.
ಕೋಟ್ಯಾಂತರ ಹಿಂದೂಗಳ ಬಹು ಕನಸ್ಸಾಗಿದ್ದ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ. ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ನೂತನ ವಿಗ್ರಹದ ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭವನ್ನು ಸೋಮವಾರ ನಿಗದಿಪಡಿಸಲಾಗಿದೆ. ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಇಂತಹ ಅಭೂತ್ವಪೂರ್ವ ಈ ಸಮಾರಂಭಕ್ಕೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ನಿಪ್ಪಾಣಿ ಶಾಸಕರು ಮತ್ತು ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಪಾಲ್ಗೊಳ್ಳಲಿದ್ದಾರೆ.




