ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರು ತಮ್ಮ ಭಿವಶಿ ಗ್ರಾಮದ ಗೃಹ ಕಛೇರಿಯಲ್ಲಿ ಜನತಾ ದರ್ಶನ ನಡೆಸಿದರು.
ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ ಮಹಿಳೆಯರು, ಹಿರಿಯ ನಾಗರಿಕರು, ಸಂಘ ಸಂಸ್ಥೆಯ ಪ್ರತಿನಿಧಿಗಳು, ರೈತರ ಹಾಗೂ ಗ್ರಾಮದ ಮುಖಂಡರುಗಳ ಸಮಸ್ಯೆಗಳನ್ನು ಆಲಿಸಿ ಅವರ ಮನವಿ ಪತ್ರಗಳನ್ನು ಸ್ವೀಕರಿಸಿದರು.
ಈ ಎಲ್ಲ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಅವರ ಬೇಡಿಕೆಗಳಿಗೆ ಸ್ಪಂದಿಸಿದರು. ಸ್ವೀಕರಿಸಿದ ಪತ್ರಗಳನ್ನು ಪರಿಶೀಲನೆ ನಡೆಸಿ ಅವುಗಳನ್ನು ಗಣನೆಗೆ ತೆಗೆದುಕೊಂಡು ಭರವಸೆಗಳನ್ನು ಆದಷ್ಟು ಬೇಗನೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ಪುತ್ರ ಬಸವಪ್ರಸಾದ ಜೊಲ್ಲೆ ಪಕ್ಕದಲ್ಲೇ ಕುಳಿತು ಜನತಾದರ್ಶನ ನಿಭಾಯಿಸುವ ರೀತಿಯನ್ನು ಗಮನಿಸುತ್ತಿದ್ದರು. ಈಗಾಗಲೆ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಹೆಜ್ಜೆ ಇಟ್ಟಿರುವ ಬಸವಪ್ರಸಾದ ಅಪ್ಪ, ಅಮ್ಮನ ದಾರಿಯಲ್ಲೇ ಸಾಗುತ್ತಿದ್ದಾರೆ. ಮನೆಯೇ ಅವರಿಗೆ ತರಬೇತಿ ಶಾಲೆಯಾಗಿದ್ದು, ತಂದೆ, ತಾಯಿಯೇ ಸಾಮಾಜಿಕ ಮತ್ತು ರಾಜಕೀಯ ಗುರುಗಳಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ