
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ- ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿ ಕೋರೋನಾ ಲಸಿಕೆಯ ವಿತರಣೆಯ ತಾಲೀಮು ಕಾರ್ಯವನ್ನು ಪರಿಶಿಲಿಸಿ ವೈದ್ಯಾಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ಕೋವಿಡ್ -೧೯ ವಿರುದ್ದ ಹೋರಾಟದಲ್ಲಿ ನಮ್ಮ ದೇಶ ಯಶಸ್ಸಿನ ಪಥದತ್ತ ಸಾಗುತ್ತಿದೆ. ಹೀಗಾಗಿ ಕರೋನಾ ಲಸಿಕೆಯ ಕಾರ್ಯ ಸುಗುಮವಾಗಿ ನಡೆಯಲು ರಾಜ್ಯಾದ್ಯಂತ ತಾಲೀಮು ನಡೆಸಲಾಗುತ್ತಿದೆ. ಜನಾಂದೋಲನ ಕಾರ್ಯದಲ್ಲಿ ಜನರ ಸ್ಪಂದನೆಯನ್ನು ಅಮಲೋಲಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಜನರ ಕ್ಷೇಮಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸರ್ವ ಸನ್ನದ್ದವಾಗಿದೆ. ಜನರು ಯಾವುದೇ ಭೀತಿಗೆ ಒಳಗಾಗದೆ ಸಹಕರಿಸಬೇಕಾಗಿ ಹೇಳಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ತಾಲುಕ ವೈದ್ಯಾಧಿಕಾರಿ ಡಾ. ವಿಠ್ಠಲ ಶಿಂಧೆ, ಅಪರ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಎಸ್ ಎಸ್ ಗಡೆದ, ಯಕ್ಸಂಬಾ ಆರೋಗ್ಯ ಮುಖ್ಯ ವೈದ್ಯಾಧಿಕಾರಿ ಡಾ. ಎಸ್ ಪಿ. ಬಾಗೇವಾಡಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಪಟ್ಟಣ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ