ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ನಿಪ್ಪಾಣಿಯಲ್ಲಿರುವ ಸಂಸ್ಥೆಯ ಸಿ.ಬಿ.ಎಸ್. ಸಿ.ಯಲ್ಲಿ, ಜೊಲ್ಲೆ ಉದ್ಯೋಗ ಸಮೂಹ, ಸಮುದಾಯ ಆರೋಗ್ಯ ಕೇಂದ್ರ, ಆಯುಷ್ಮಾನ್ ವಿಭಾಗ, ನಿಪ್ಪಾಣಿ ಪರಿಸರದಲ್ಲಿರುವ ಎಲ್ಲಾ ಖಾಸಗಿ ವೈದ್ಯರು ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ನಿರ್ಮಿಸಲಾದ ಕೋವಿಡ್ ಕೇರ್ ಸೆಂಟರ್ ಗೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರಿಗೆ ನಿಪ್ಪಾಣಿಯ ಮಹಾವೀರ ಆರೋಗ್ಯ ಸೇವಾ ಸಂಘದಿಂದ 3 ಆಮ್ಲಜನಕ ಸಾಂದ್ರಕ ಮೆಷಿನ್ ಅನ್ನು ದಾನ ಮಾಡಿದ್ದಾರೆ.
ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ ಕೊರೋನಾದಿಂದ ರೋಗಿಗಳನ್ನು ರಕ್ಷಿಸಲು ನಮ್ಮ ಸೇವಾ ಕಾರ್ಯಕ್ಕೆ ಕೈ ಜೋಡಿಸಿದ ಮಹಾವೀರ ಆರೋಗ್ಯ ಸೇವಾ ಸಂಘಕ್ಕೆ ಮನಃಪೂರ್ವಕ ಧನ್ಯವಾದಗಳು. ಜನರ ಆರೋಗ್ಯ ರಕ್ಷಣೆಗಾಗಿ ಮುಕ್ತ ಮನಸ್ಸಿನಿಂದ ದಾನಿಗಳು ನೆರವು ನೀಡಿದಲ್ಲಿ ಅದನ್ನು ಸ್ವೀಕರಿಸಲಾಗುವುದು. ಇದರಿಂದ ನಮ್ಮಲ್ಲಿರುವ ಆಕ್ಸಿಜನ್ ಬೆಡ್ ಗಳ ಸಂಖ್ಯೆ 19 ಆಗಿದೆ. ಎಂದರು.
ಈ ಸಂದರ್ಭದಲ್ಲಿ ಮಹಾವೀರ ಆರೋಗ್ಯ ಸೇವಾ ಸಂಘದ ಅಧ್ಯಕ್ಷರಾದ ಪ್ರಕಾಶಭಾಯಿ ಶಹಾ, ಉಪಾಧ್ಯಕ್ಷರಾದ ಸತೀಶ್ ವಖರಿಯಾ ಹಾಗೂ ವೈದ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.
ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ