ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತ್ರತ್ವದಲ್ಲಿ ಕೇಂದ್ರ ಸರ್ಕಾರ ಎರಡನೇ ಅವಧಿಯ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಹಿನ್ನೆಲೆಯಲ್ಲಿ “ಸೇವಾಹೀ ಸಂಘಟನ್” ಎಂಬ ಧ್ಯೇಯದೊಂದಿಗೆ ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಉದ್ಯೋಗ ಸಮೂಹದ ವತಿಯಿಂದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಕೋವಿಡ್-19 ತಪಾಸಣಾ ಕಿಟ್, ಅಗತ್ಯವಿರುವವರಿಗೆ ಹೋಮ್ ಐಸೋಲೇಶನ್ ಕಿಟ್ ಹಾಗೂ ಉಗಿ ಸೇವನೆ ಸಾಧನ (Steamer) ಗಳನ್ನು ವಿತರಿಸಲಾಯಿತು.
ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷ್ಯ ಬಸವಪ್ರಸಾದ ಜೊಲ್ಲೆ ಯವರಿಂದ ಕಿಟ್ ಗಳನ್ನು ವಿತರಿಸಲಾಯಿತು.
ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ ಕೋವಿಡ್ ಸಾಂಕ್ರಾಮಿಕವನ್ನು ತೊಡೆದು ಹಾಕಲು ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ಫ್ರಂಟ್ ಲೈನ್ ವಾರಿಯರ್ಸ್ ಗಳಿಗೆ ಧನ್ಯವಾದಗಳನ್ನು ಅರ್ಪಿಸಿ, ಜನಸಾಮಾನ್ಯರ ಆರೋಗ್ಯ ಸಂರಕ್ಷಣಾ ಕಾಯಕವನ್ನು ಮುಂದುವರೆಸುವಂತೆ ಹುರಿದುಂಬಿಸಿದರು. ಇದೇ ವೇಳೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ತಮ್ಮ ಕಾರ್ಯವ್ಯಾಪ್ತಿಯಲ್ಲಿನ ಪ್ರತಿ ಮನೆಗೂ ಭೇಟಿ ನೀಡಿ, ಅಗತ್ಯ ಸೇವೆ ಒದಗಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬೀರೇಶ್ವರ ಸಂಸ್ಥೆಯ ಅಧ್ಯಕ್ಷರಾದ ಜಯಾನಂದ ಜಾಧವ, ನಿರ್ದೇಶಕರಾದ ಅಪ್ಪಾಸಾಹೇಬ ಜೊಲ್ಲೆ, ಕಲ್ಲಪ್ಪ ಜಾಧವ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಪ.ಪಂ.ಸದಸ್ಯರು ಉಪಸ್ಥಿತರಿದ್ದರು.
ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ವಿವಿಧೆಡೆ ರೇಷನ್ ಕಿಟ್ ವಿತರಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ