Latest

ಸಂಪೂರ್ಣ ಮುಳುಗಡೆ ಹಂತದಲ್ಲಿದೆ ಜ್ಯೋತಿರ್ಲಿಂಗದ ತಾಣ ಜೋಶಿಮಠ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಹಿಮಾಲಯದ ತಪ್ಪಲಿನ ಜ್ಯೋತಿರ್ಲಿಂಗದ ಪ್ರಮುಖ ತಾಣ, ಉತ್ತರಾಖಂಡದ ಜೋಶಿಮಠ ಪಟ್ಟಣ ಇನ್ನು ಕೆಲ ದಿನಗಳಲ್ಲೇ ಸಂಪೂರ್ಣ ಮುಳುಗಡೆಯಾಗಿದೆ.

ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ರಾಷ್ಟ್ರೀಯ ದೂರಸಂವೇದಿ ಕೇಂದ್ರ ಜೋಶಿಮಠದ ಉಪಗ್ರಹ ಚಿತ್ರಗಳನ್ನು ಮತ್ತು ಭೂ ಕುಸಿತದ ಪ್ರಾಥಮಿಕ ವರದಿಯೊಂದನ್ನು ಬಿಡುಗಡೆಗೊಳಿಸುವ ಮೂಲಕ ಎಚ್ಚರಿಕೆ ನೀಡಿದೆ.

ಚಿತ್ರಗಳನ್ನು ಕಾರ್ಟೊಸ್ಯಾಟ್-2ಎಸ್ ಉಪಗ್ರಹದಿಂದ ತೆಗೆಯಲಾಗಿದೆ. ಹೈದರಾಬಾದ್ ಮೂಲದ ಎನ್ಆರ್ ಎಸ್ ಸಿ ಮುಳುಗುತ್ತಿರುವ ಪ್ರದೇಶಗಳ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಭಾರತೀಯ ಸೇನಾಪಡೆಯ ಹೆಲಿಪ್ಯಾಡ್ ಮತ್ತು ನರಸಿಂಹ ದೇವಸ್ಥಾನ ಸೇರಿದಂತೆ ಇಡೀ ಪಟ್ಟಣವನ್ನು ಸೂಕ್ಷ್ಮ ವಲಯ ಎಂದು ಗುರುತಿಸಲಾಗಿದೆ.

ಇಸ್ರೋದ ಪ್ರಾಥಮಿಕ ವರದಿಯ ಆಧಾರದ ಮೇಲೆ, ಉತ್ತರಾಖಂಡ ಸರ್ಕಾರ  ಅಪಾಯ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಿದೆ. ಈ ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಪ್ರಯತ್ನ ಮುಂದುವರಿದಿದ್ದು 80ಕ್ಕೂ ಹೆಚ್ಚು ಕುಟುಂಬಗಳನ್ನು ಈಗಾಗಲೇ ಸ್ಥಳಾಂತರಗೊಳಿಸಿದೆ. 680ಕ್ಕೂ ಹೆಚ್ಚು ಮನೆಗಳು ಶಿಥಿಲಗೊಂಡಿವೆ. ಈ ಭಾಗದ ಜನರ ಪುನರ್ವಸತಿಗೆ 45 ಕೋಟಿ ರೂ. ಘೋಷಿಸಿದೆ.

ವರದಿಯ ಪ್ರಕಾರ, 2022ರ ಏಪ್ರಿಲ್ ಮತ್ತು ನವೆಂಬರ್ ನಡುವೆ ಭೂಮಿಯ ಕುಸಿತ  ನಿಧಾನವಾಗಿತ್ತು. ಈ ಸಮಯದಲ್ಲಿ ಜೋಶಿಮಠವು 8.9 ಸೆಂ.ಮೀ ಕುಸಿದಿದೆ. ಆದರೆ 2022ರ ಡಿಸೆಂಬರ್ 27ರಿಂದ 2023 ಜನವರಿ 8ರ ನಡುವೆ, ಭೂಮಿಯ ಕುಸಿತದ ತೀವ್ರತೆ ಹೆಚ್ಚಾಗಿದೆ. ಈ 12 ದಿನಗಳ ಅಂತರದಲ್ಲಿ ಪಟ್ಟಣ 5.4 ಸೆಂ.ಮೀ ನಷ್ಟು ಕುಸಿದಿದೆ ಎಂದು ತಿಳಿಸಿದೆ.

ಭೂ ಕುಸಿತದಿಂದ ಜೋಶಿಮಠ-ಔಲಿ ರಸ್ತೆಯೂ ನಾಶವಾಗಲಿದೆ ಎಂದು ಇಸ್ರೋ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಪಟ್ಟಣದಲ್ಲಿ ಭೂಮಿ ಕುಸಿದ ನಂತರ ಮನೆ, ರಸ್ತೆಗಳಲ್ಲಿ ಕಾಣಿಸಿಕೊಂಡ ಬಿರುಕುಗಳ ಬಗ್ಗೆ ವಿಜ್ಞಾನಿಗಳು ಅಧ್ಯಯನ ನಡೆಸುತ್ತಿದ್ದರೂ ಇಸ್ರೋದ ಪ್ರಾಥಮಿಕ ವರದಿಯಲ್ಲಿ ಕಂಡು ಬಂದಿರುವುದು ಭಯ ಹುಟ್ಟಿಸುವಂತಿದೆ.

ಜ್ಯೋತಿರ್ಲಿಂಗದ ತಾಣವಾಗಿರುವ ಈ ಪಟ್ಟಣದ ಮೂಲ ಹೆಸರು ‘ಜ್ಯೋತಿರ್ಮಠ’. ಕಾಲಕ್ರಮೇಣ ಇದು ‘ಜೋಶಿಮಠ’ ಎಂದು ಕರೆಯಲ್ಪಡುತ್ತಿತ್ತು. ಮಹಾಭಾರತದ ಕಾಲದ ಶ್ರೀಕೃಷ್ಣನ ದ್ವಾರಕೆ, ದಕ್ಷಿಣ ಭಾರತದ ಧನುಷ್ಕೋಟ್ ದ್ವೀಪ ಸಮುದ್ರದಲ್ಲಿ ಮುಳುಗಡೆಯಾಗುವ ಮೂಲಕ ಅದೃಶ್ಯ ಧಾರ್ಮಿಕ ತಾಣಗಳ ಪಟ್ಟಿಗೆ ಸೇರಿದ್ದರೆ ಇದೀಗ ಇನ್ನೊಂದು ಧಾರ್ಮಿಕ ತಾಣ ಜೋಶಿಮಠ ಕಾಲಗರ್ಭ ಸೇರುತ್ತಿರುವುದು ವಿಪರ್ಯಾಸವೇ ಸರಿ.

*ಸಿದ್ದರಾಮಯ್ಯಗೆ ಶಕ್ತಿ ದೇವತೆ ನೀಡಿದ ಸಂದೇಶವೇನು? *

https://pragati.taskdun.com/vidhanasabha-electionsiddaramaiahchikkamma-devi/

ವಿಶ್ವದ ಅತಿ ಉದ್ದದ ನದಿ ಕ್ರೂಸ್ ಎಂವಿ ಗಂಗಾ ವಿಲಾಸ್‌ಗೆ ಚಾಲನೆ ನೀಡಿದ ಪ್ರಧಾನಿ ಮೋದಿ

https://pragati.taskdun.com/prime-minister-modi-launched-worlds-longest-river-cruise-mv-ganga-vilas/

*ಭೀಕರ ಅಪಘಾತ; 10 ಪ್ರಯಾಣಿಕರು ದುರ್ಮರಣ*

https://pragati.taskdun.com/truckbus-accident10-people-deathnasik-shiradi-highway/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button