Karnataka News

*ಪತ್ರಕರ್ತ ಭುವನೇಂದ್ರ ಪುದುವೆಟ್ಟು ವಿಧಿವಶ*

ಪ್ರಗತಿವಾಹಿನಿ ಸುದ್ದಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು.

ಬೆಳ್ತಂಗಡಿ ಸುದ್ದಿಬಿಡುಗಡೆ ವಾರಪತ್ರಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭುವನೇಂದ್ರ ಪುದುವೆಟ್ಟು, ಎರಡು ದಿನಗಳಿಂದ ತೀವ್ರ ಹೊಟ್ಟೆನೋವು, ವಾಂತಿಯಿಂದ ಬಳಲುತ್ತಿದ್ದರು. ಅವರನ್ನು ಮೂಡಬಿದರೆಯ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರಿನ ಅತ್ತಾವರದ ಕೆ ಎಂಸಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಆಸ್ಪತೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಭುವನೇಂದ್ರ ಅವರು ವಿಜಯವಾಣಿ, ಕರಾವಳಿ ಅಲೆ, ವೆಬ್ ದುನಿಯಾ, ಕಸ್ತೂರಿ ಚಾನಲ್ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಕಳೆದ 6 ತಿಂಗಳಿಂದ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ತಂದೆ-ತಾಯಿ,ಸಹೋದರ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related Articles

Back to top button