Latest

ಜಯತೀರ್ಥ ಕಾಗಲಕರ್ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಕೊರೊನೊ ಸೊಂಕಿಗೆ ಬಲಿಯಾಗಿದ್ದಾರೆ.

ವಾರದ ಹಿಂದೆ ಕೊರೊನೊ ಸೊಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

Home add -Advt

ಕಳೆದ ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಾ ಇತ್ತೀಚಿಗೆ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು.

ಮೂರು ದಶಕಗಳಿಂದ ಹಲವು ಜನಪರ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆಯುತ್ತಿದ್ದ ಕಾಗಲಕರ್ ಅವರ ಅಗಲುವಿಕೆಗೆ ಸಂಸದರು, ಶಾಸಕರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.

ಬ್ಲ್ಯಾಕ್ ಫಂಗಸ್; ಇಬ್ಬರು ಬಲಿ

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ

Related Articles

Back to top button