Latest

*ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ಪತ್ರಕರ್ತ ಶಶಿಧರ್ ಭಟ್; ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: ಸಿಎಂ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತ ಶಶಿಧರ್ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶಶಿಧರ್ ಭಟ್ ಅವರಿಗೆ ಕರೆಮಾಡಿ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಮುತುವರ್ಜಿಯಿಂದ ಅವರ ಆರೈಕೆ ಮಾಡುವಂತೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.

Home add -Advt

ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ.

https://www.facebook.com/share/p/eyJEJgfNW3ixsCMT/?mibextid=oFDknk


Related Articles

Back to top button