Film & EntertainmentKannada NewsLatest

*ಹಿರಿಯ ಪತ್ರಕರ್ತ, ಚಿತ್ರ ನಿರ್ದೇಶಕ ಎನ್.ಎಸ್. ಶಂಕರ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಕನ್ನಡದ ಬಹುಮುಖ ಪ್ರತಿಭೆ, ಹಿರಿಯ ಪತ್ರಕರ್ತ ಮತ್ತು ಚಿತ್ರ ನಿರ್ದೇಶಕ ಎನ್.ಎಸ್. ಶಂಕರ್ ನಿಧನರಾಗಿದ್ದಾರೆ. ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದ ಅವರು ಪತ್ರಿಕೋದ್ಯಮ ಮತ್ತು ಚಲನಚಿತ್ರ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ.

Home add -Advt

ಪ್ರಜಾವಾಣಿ, ಮುಂಗಾರು, ಸುದ್ದಿಸಂಗಾತಿ ಮತ್ತು ಲಂಕೇಶ್ ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ಶಂಕರ್, ‘ಉಲ್ಟಾ ಪಲ್ಟಾ’ ಸೇರಿದಂತೆ ಹಲವು ಸಿನೆಮಾಗಳನ್ನು ನಿರ್ದೇಶಿಸಿದ್ದರು. ಲಂಕೇಶ್ ಒಡನಾಡಿಯಾಗಿದ್ದ ಅವರು ಬರಹಗಾರರಾಗಿ, ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ಸದಾ ಹಸನ್ಮುಖಿ, ಜೀವಪರ ಬದುಕು ಬದುಕಿದ ಶಂಕರ್ ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.

ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. “ಇನ್ನಷ್ಟು ಕಾಲ ನಮ್ಮ ಜೊತೆ ಇದ್ದು, ನಮಗೆಲ್ಲ ಮಾರ್ಗದರ್ಶನ ನೀಡಬೇಕಾಗಿತ್ತು” ಎಂದು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ವ್ಯಕ್ತವಾಗಿದೆ.

ಶಂಕರ್ ಅವರ ಅಗಲಿಕೆ ಕನ್ನಡ ಪತ್ರಿಕೋದ್ಯಮ, ಸಾಹಿತ್ಯ ಮತ್ತು ಸಿನೆಮಾ ರಂಗಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬವರ್ಗದವರ ದುಃಖದಲ್ಲಿ ನಾಡಿನ ಜನತೆ ಭಾಗಿಯಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಲಾಗಿದೆ.

Related Articles

Back to top button